ಮನೆ ಅಪರಾಧ 5 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ – ಇಬ್ಬರು ಅರೆಸ್ಟ್‌..!

5 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ – ಇಬ್ಬರು ಅರೆಸ್ಟ್‌..!

0

ಬೀದರ್ : ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟಕ್ಕೆ ತಂದಿದ್ದ 5 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಜಿಜಾವು ನಗರದಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಬೀದರ್ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ

ನೆರೆರಾಜ್ಯ ಮಹಾರಾಷ್ಟ್ರದಿಂದ ಗಾಂಜಾ ತಂದು ಬಸವಕಲ್ಯಾಣದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಖದೀಮರ ಜಾಲವನ್ನು ಬಯಲಿಗೆಳೆದಿದ್ದು, ಹೆಡೆಮುರಿ ಕಟ್ಟಿದ್ದಾರೆ. ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.