ಮನೆ ಕ್ರೀಡೆ ಭಾರತ-ಪಾಕ್‌ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಭಾರತ-ಪಾಕ್‌ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

0

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಸೆ.14ರಂದು ನಡೆಯಲಿರುವ ಟಿ20 ಏಷ್ಯಾಕಪ್‌ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆಗೆ ತಿರಸ್ಕರಿಸಿದೆ.

2025ರ ಟಿ20 ಏಷ್ಯಾಕಪ್‌ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ – ಪಾಕ್‌ ನಡುವಿನ ಪಂದ್ಯಕ್ಕೆ ಭಾರೀ ವಿರೋಧ ಕೇಳಿಬರ್ತಿದೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿವೆ. ಹೀಗಾಗಿ ಇಂಡೋ-ಪಾಕ್‌ ಪಂದ್ಯ ನಿಲ್ಲಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ.

ಅದೇ ರೀತಿ ಭಾರತ-ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಪಂದ್ಯವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸೋದಕ್ಕೂ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠವು ಅರ್ಜಿ ವಿಚಾರ ಕೇಳೋದಕ್ಕೂ ನಿರಾಕರಿಸಿದ್ದು, ಇದು‌ ಕೇವಲ ಒಂದು ಪಂದ್ಯ ಅಷ್ಟೇ ಎಂದು ಹೇಳಿದೆ. ಊರ್ವಶಿ ಜೈನ್‌ ನೇತೃತ್ವದಲ್ಲಿ ನಾಲ್ವರು ಕಾನೂನು ವಿದ್ಯಾರ್ಥಿಗಳ ಪರವಾಗಿ ಸಂವಿಧಾನದ 32ನೇ ವಿಧಿ ಅಡಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿತ್ತು.

ಸೆ.14ರಂದು ದುಬೈನಲ್ಲಿ ಏಷ್ಯಾಕಪ್‌ ಭಾಗವಾಗಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ20 ಕ್ರಿಕೆಟ್‌ ಪಂದ್ಯವನ್ನ ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ತುರ್ತು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಈ ವೇಳೆ ನ್ಯಾ. ಮಹೇಶ್ವರಿ ತುರ್ತು ಏನಿದೆ? ಅಂತ ಪ್ರಶ್ನಿಸಿದರಲ್ಲದೇ ಅದು ಒಂದು ಅಷ್ಟೇ.. ಭಾನುವಾರ ಪಂದ್ಯ ಇದೆ, ಏನು ಮಾಡೋಕಾಗುತ್ತೆ? ಅಂತ ತಿಳಿಸಿದ್ದಾರೆ.