ಮನೆ ರಾಷ್ಟ್ರೀಯ ಭ್ರಷ್ಟಾಚಾರ ಆರೋಪ: ಸಿಎಂ ಕಚೇರಿಯ ಮೂವರು ಅಧಿಕಾರಿಗಳು ಅಮಾನತು

ಭ್ರಷ್ಟಾಚಾರ ಆರೋಪ: ಸಿಎಂ ಕಚೇರಿಯ ಮೂವರು ಅಧಿಕಾರಿಗಳು ಅಮಾನತು

0

ನವದೆಹಲಿ (New Delhi): ಭ್ರಷ್ಟಾಚಾರದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಚೇರಿಯ ಮೂವರನ್ನು ಅಮಾನತು ಮಾಡಲಾಗಿದೆ.

ಮುಖ್ಯಮಂತ್ರಿ ಕಚೇರಿಯ ಉಪ ಕಾರ್ಯದರ್ಶಿ ಮತ್ತು ಇಬ್ಬರು ಉಪವಿಭಾಗಾಧಿಕಾರಿಗಳನ್ನು ಅಮಾನತು ಮಾಡಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಕಚೇರಿಯ ಉಪ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಚಂದ್ರ ಠಾಕೂರ್, ವಸಂತ್ ವಿಹಾರ್‌ನ ಉಪವಿಭಾಗಾಧಿಕಾರಿ ಹರ್ಷಿತ್ ಜೈನ್ ಮತ್ತು ವಿವೇಕ್ ವಿಹಾರ್‌ನ ದೇವೇಂದ್ರ ಶರ್ಮಾ ಅವರನ್ನು ಅಮಾನತು ಮಾಡಲಾಗಿದೆ. ಮೂವರ ವಿರುದ್ಧವೂ ಶಿಸ್ತು ಕ್ರಮಕ್ಕೆ ಆದೇಶಿಸಲಾಗಿದೆ.

ಈ ಕ್ರಮವು ಲೆಫ್ಟಿನೆಂಟ್ ಗವರ್ನರ್ ಅವರ ಭ್ರಷ್ಟಾಚಾರ ವಿರುದ್ಧದ ಶೂನ್ಯ ಸಹಿಷ್ಣುತೆ ಮತ್ತು ಸರ್ಕಾರಿ ಕೆಲಸದಲ್ಲಿ ಪ್ರಾಮಾಣಿಕತೆ ಖಚಿತ ಪಡಿಸುವ ಅವರ ಬದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಮೂಲಗಳು ಹೇಳಿವೆ.

ಕಲ್ಕಾಜಿ ಬಡಾವಣೆಯ ಇಡಬ್ಲ್ಯುಎಸ್ ಫ್ಲಾಟ್‌ಗಳ ನಿರ್ಮಾಣದಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಇಬ್ಬರು ಸಹಾಯಕ ಇಂಜಿನಿಯರ್‌ಗಳನ್ನು ಲೆಫ್ಟಿನೆಂಟ್ ಗವರ್ನರ್ ಸೋಮವಾರ ಅಮಾನತು ಮಾಡಿದ್ದರು.