ರಾಯ್ಪುರ : ಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ತು ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಮೈನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ವಿಶೇಷ ಕಾರ್ಯಪಡೆ (ಎಸ್ಟಿಎಫ್), ಕೋಬ್ರಾ ಪಡೆ ಮತ್ತು ಇತರ ರಾಜ್ಯ ಪೊಲೀಸ್ ಘಟಕಗಳಿಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾರಾಯಣಪುರ ಜಿಲ್ಲೆಯಲ್ಲಿ 16 ಮಾವೋವಾದಿಗಳು ಶರಣಾಗಿದ್ದಾರೆ. ಬುಧವಾರ (ಸೆ.10) ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಮಾವೋವಾದಿ ಸಿದ್ಧಾಂತದ ಬಗ್ಗೆ ಅವರು ನಿರಾಶೆಗೊಂಡಿದ್ದಾರೆ. ಮುಗ್ಧ ಬುಡಕಟ್ಟು ಜನಾಂಗದವರ ಮೇಲೆ ಅವರು ನಡೆಸಿದ ದೌರ್ಜನ್ಯ ಮತ್ತು ಅವರ ಒಳಗೆ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ಅವರು ಬೇಸತ್ತು ಶರಣಾಗಿದ್ದಾರೆ. ಎಲ್ಲಾ 16 ಮಾವೋವಾದಿಗಳು ವಿವಿಧ ಘಟಕಗಳಿಗೆ ಸೇರಿದ ಕೆಳ ಹಂತದ ಕೇಡರ್ಗಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.














