ಮನೆ ರಾಜ್ಯ ನಟ ದಿಗಂತ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ನಟ ದಿಗಂತ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

0

ಬೆಂಗಳೂರು (Bengaluru): ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ನಟ ದಿಗಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಗೋವಾದಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ದಿಗಂತ್‌ ಕುತ್ತಿಗೆಗೆ ಪೆಟ್ಟಾಗಿತ್ತು. ಬಳಿಕ ತಕ್ಷಣ ಅವರನ್ನು ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ಕರೆತರಲಾಗಿತ್ತು.

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಬೆನ್ನುಮೂಳೆ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.ಎಸ್. ವಿದ್ಯಾಧರ್ ನೇತೃತ್ವದ ವೈದ್ಯರ ತಂಡವು ತಪಾಸಣೆ ನಡೆಸಿ, ಶಸ್ತ್ರಚಿಕಿತ್ಸೆ ಮಾಡಿದ್ದರು.

ದಿಗಂತ್ ಅವರಿಗೆ ನಡೆಸಲಾದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದು, ಮನೆಗೆ ಕಳುಹಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.