ಬೆಂಗಳೂರು : ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳಲ್ಲಿ ನಡೆಯುತ್ತಿದ್ದ ಲೂಟಿಗೆ ಕೊನೆಗೂ ರಾಜ್ಯ ಸರ್ಕಾರ ಕಡಿವಾಣ ಹಾಕಿದ್ದು, ಸಿನಿಮಾ ಪ್ರಿಯರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಟಿಕೆಟ್ ದರ ಎಷ್ಟು? – ಇನ್ಮುಂದೆ ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿಗಳಲ್ಲಿ, ಎಲ್ಲಾ ಭಾಷಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಕ್ಕೆ ಎಲ್ಲಾ ರೀತಿಯ ತೆರಿಗೆ ಹೊರತುಪಡಿಸಿ ಟಿಕೆಟ್ ದರ 200 ರೂ. ಮೀರದಂತೆ ಆದೇಶದಲ್ಲಿ ತಿಳಿಸಿದೆ. 75 ಆಸನಗಳು ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರಿಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರ ಮಂದಿರಗಳನ್ನು ನಿಗದಿಪಡಿಸಿರುವ 200 ರೂ.ಗಳ ಗರಿಷ್ಠ ಟಿಕೆಟ್ ದರ ಮಿತಿಯಿಂದ ಹೊರಗಿಟ್ಟಿದೆ.
ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಥಿಯೇಟರ್ ಮಾಲೀಕರು ಸಿನಿಮಾಗೆ ಹೆಚ್ಚು ದರದ ಟಿಕೆಟ್ ನಿಗದಿ ಮಾಡುವ ಕಾರಣ ಜನ ಥಿಯೇಟರ್ ಗಳಿಗೆ ಬರುತ್ತಿಲ್ಲ. ಒಂದೊಂದು ಮಾಲ್ ನಲ್ಲಿ ಬೇರೆ ಬೇರೆ ರೀತಿಯ ದರವಿದೆ. ಹೀಗಾಗಿ ಟಿಕೆಟ್ ದರವನ್ನು ಕಡಿಮೆ ಮಾಡಿ ಏಕರೂಪದ ದರವನ್ನು ತರಬೇಕು ಎಂದು ಆಗ್ರಹಿಸಿ ಜನ ಮತ್ತು ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಕಳೆದ ವರ್ಷ ಆಂದೋಲನ ನಡೆಸಿದ್ದರು. ತಮಿಳುನಾಡಿನಲ್ಲಿ ಗರಿಷ್ಠ 120 ರೂ. ಟಿಕೆಟ್, ಆಂಧ್ರಪ್ರದೇಶದಲ್ಲಿ ಗರಿಷ್ಠ 150 ರೂ. ನಿಗದಿಯಾಗಿರುವಾಗ ನಮ್ಮಲ್ಲಿ ಯಾಕೆ ದರವನ್ನು ನಿಗದಿ ಮಾಡಬಾರದು ಎಂದು ಸರ್ಕಾರವನ್ನು ಪ್ರಶ್ನಿಸಿದ್ದರು.
ಈ ಸಮಿತಿ ಟಿಕೆಟ್ ದರಕ್ಕೆ ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು ಹಾಗೂ ಪ್ರೈಮ್ ಟೈಂನಲ್ಲಿ ಪ್ರತಿ ಮಲ್ಟಿಪ್ಲೆಕ್ಸ್ ನಲ್ಲಿ ಎರಡು ಕನ್ನಡ ಸಿನೆಮಾಗಳನ್ನು ಕಡ್ಡಾಯವಾಗಿ ತೋರಿಸಲು ನಿಯಮ ಹೇರುವಂತೆ ಸರ್ಕಾರಕ್ಕೆ ವರದಿ ನೀಡಿತ್ತು. ಈ ಹಿನ್ನೆಲೆ ಏಕರೂಪ ದರ ನಿಗಡಿಮಾಡಿ ರಾಜ್ಯ ಸರ್ಕಾರ ಆದೇಶ ಹೊಡಿಸಿದೆ.














