ಮನೆ ಸುದ್ದಿ ಜಾಲ ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ – ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ..!

ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ – ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ..!

0

ಪಾಟ್ನಾ : ಪ್ರಧಾನಿ ನರೇಂದ್ರ ಮೋದಿಯವರ ದಿವಂಗತ ತಾಯಿ ಹೀರಾಬೆನ್ ಮೋದಿ ಅವರ ಕುರಿತಾದ ಎಐ ಆಧಾರಿತ ವೀಡಿಯೊವನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಪಾಟ್ನಾ ಹೈಕೋರ್ಟ್ ಕಾಂಗ್ರೆಸ್‌ಗೆ ಸೂಚಿಸಿದೆ.

ಬಿಹಾರ ಕಾಂಗ್ರೆಸ್ ಪೋಸ್ಟ್ ಮಾಡಿದ ಕೃತಕ ಬುದ್ಧಿಮತ್ತೆ ಆಧಾರಿತ ವೀಡಿಯೊ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಕಾಂಗ್ರೆಸ್‌ಗೆ ಸೂಚನೆ ನೀಡಿದೆ.

ವಿರೋಧ ಪಕ್ಷವು ಪ್ರಧಾನಿಯವರ ದಿವಂಗತ ತಾಯಿಗೆ ಅಗೌರವ ತೋರಿದೆ ಎಂದು ಬಿಜೆಪಿ ಆರೋಪಿಸಿತ್ತು. ವೀಡಿಯೊದಲ್ಲಿ ಎಲ್ಲಿಯೂ ಹೀರಾಬೆನ್ ಮೋದಿಗೆ ಅಗೌರವ ತೋರಿಲ್ಲ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ.