ಮನೆ ಅಪರಾಧ ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು

ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು ಸಾವು

0

ಕೋಲಾರ : ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಹಾಗೂ ಅಪ್ರಾಪ್ತೆ ಮೃತಪಟ್ಟಿದ್ದಾರೆ.

ಇವರಿಬ್ಬರ ಪ್ರೀತಿಗೆ 2 ಮನೆಯವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಬೈಕ್ ನಿಲ್ಲಿಸಿ, ಕೋಲಾರದಿಂದ ಬೆಂಗಳೂರಿಗೆ ತೆರಳುವ ರೈಲಿಗೆ ತಲೆಕೊಟ್ಟಿದ್ದಾರೆ.

ರೈಲಿನಡಿ ಸಿಲುಕಿದ ದೇಹಗಳು ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.