ಮನೆ ಅಪರಾಧ ಟ್ರ್ಯಾಕ್ಟರ್- ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಟ್ರ್ಯಾಕ್ಟರ್- ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

0

ಹುಣಸೂರು(Hunsur): ನಗರದ ಕಲ್ಕುಣಿಕೆ ಬಡಾವಣೆ ಹೊರವಲಯದ ಕೆ.ಆರ್.ನಗರ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಟ್ರಾಕ್ಟರ್‌ ಮತ್ತು ಬೈಕ್‌ ನಡುವೆ ಅಪಘಾತವಾಗಿ ಸ್ಥಳದಲ್ಲೇ ಬೈಕ್‌ ಸವಾರ ಮೃತಪಟ್ಟಿದ್ದಾರೆ.

ಮೃತರ ಮಾಹಿತಿ ತಿಳಿದುಬಂದಿಲ್ಲ. ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.ಸ್ಥಳಕ್ಕೆ ನಗರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಭೇಟಿ ನೀಡಿ ರಸ್ತೆ ಸಂಚಾರ ಸುಗಮಗೊಳಿಸಿದರು.

ಈ ಸಂಬಂಧ ಪ್ರಕರಣ ದಾಖಲಾಗಿದೆ.ಗಾಯ: ಮೈಸೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಬಿಳಿಕೆರೆ –ಹಾಸನ ಕ್ರಾಸ್ ಬಳಿ ಕಾರು ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರ ಸವಾರ ಹಾಗೂ ಹಿಂಬದಿಯಲ್ಲಿದ್ದ ಮಹಿಳೆಗೆ ಗಾಯಗಳಾಗಿವೆ.

ಸ್ಥಳಕ್ಕೆ ಬಿಳಿಕೆರೆ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.