ಮನೆ ಆರೋಗ್ಯ ಕೊರೊನಾ: ದೇಶದಲ್ಲಿಂದು 15,940 ಹೊಸ ಕೇಸ್ ಪತ್ತೆ

ಕೊರೊನಾ: ದೇಶದಲ್ಲಿಂದು 15,940 ಹೊಸ ಕೇಸ್ ಪತ್ತೆ

0

ನವದೆಹಲಿ(New Delhi): ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 15,940 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,33,78,234ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,974ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 91,779ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 12,425 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,27,61,481ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,01,649 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈ ವರೆಗೂ 85,98,95,036 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,96,77,33,217 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.