ಮನೆ ಅಪರಾಧ ಮನೆಯಲ್ಲಿ ಒಂಟಿಯಾಗಿದ್ದ ಗೃಹಿಣಿ ಮೇಲೆ ಅತ್ಯಾಚಾರ, ಕೊಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ

ಮನೆಯಲ್ಲಿ ಒಂಟಿಯಾಗಿದ್ದ ಗೃಹಿಣಿ ಮೇಲೆ ಅತ್ಯಾಚಾರ, ಕೊಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ

0

ದಾವಣಗೆರೆ(Davanagere): ಮನೆಯಲ್ಲಿ  ಒಂಟಿಯಾಗಿದ್ದ ಗೃಹಿಣಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಘಟನೆ ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ವಿವಾಹಿತ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ ಆರೋಪಿ, ಬಳಿಕ 40 ವರ್ಷದ ಗೃಹಿಣಿ ಮೇಲೆ ಅತ್ಯಾಚಾರ ಎಸಗಿ ಕೊಂದು ಹಾಕಿ ಏನು ತಿಳಿಯದಂತೆ ಸುಮ್ಮನ್ನಿದ್ದನು.

ಮೃತಳ ಪತಿ ಕೆಲಸದ ನಿಮಿತ್ತ ಗ್ರಾಮವೊಂದಕ್ಕೆ ತೆರಳಿದ್ದರು. ತಮ್ಮ ಕೆಲಸ ಮುಗಿಸಿ ಮನೆಗೆ ಮರಳಿದಾಗ ಪತ್ನಿ ಶವವಾಗಿ ಬಿದ್ದಿರುವುದನ್ನು ಕಂಡು ದಂಗಾದರು. ಕೂಡಲೇ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಪೊಲೀಸರು ಯಾರ ಮೇಲಾದರೂ ಅನುಮಾನ ಇದೆಯಾ ಎಂದು ಪ್ರಶ್ನಿಸಿದಾಗ ಗ್ರಾಮದ ಹರೀಶ್​ ಎಂಬ ವ್ಯಕ್ತಿ ಹೆಸರನ್ನು ಹೇಳಿದ್ದಾರೆ. ಈ ಹಿನ್ನೆಲೆ ಹೊನ್ನಾಳಿ ಪೋಲಿಸರು ಹರೀಶ್ ಎಂಬಾತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ರಿಷ್ಯಂತ್, ಡಿವೈಎಸ್ಪಿ ಡಾ.ಸಂತೋಷ್, ಸಿಪಿಐ ದೇವರಾಜ್, ಪಿಎಸ್‌ಐ ಬಸವನಗೌಡ ಬಿರಾದರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸುವುದಾಗಿ ಪೋಲಿಸರು ತಿಳಿಸಿದ್ದಾರೆ.