ಮನೆ ರಾಜ್ಯ ಬೆಳಗಾವಿಯಲ್ಲಿ ಭೀಕರ ಅಪಘಾತ: ಮೃತ ಕಾರ್ಮಿಕ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ

ಬೆಳಗಾವಿಯಲ್ಲಿ ಭೀಕರ ಅಪಘಾತ: ಮೃತ ಕಾರ್ಮಿಕ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ

0

ಬೆಂಗಳೂರು (Bengaluru): ಬೆಳಗಾವಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಪ್ರಕಟಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್‌ ಪಲ್ಟಿಯಾಗಿ ಬಳ್ಳಾರಿ ನಾಲೆಗೆ ಬಿದ್ದು, ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಮೃತರಾಗಿರುವ ಕಾರ್ಮಿಕರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಐವರು ಕಾರ್ಮಿಕರಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಕಾರ್ಮಿಕ ಕಾರ್ಡ್‌ ಇಲ್ಲದ ಮೃತ ಕಾರ್ಮಿಕರ ಕುಟುಂಬದ ಬಗ್ಗೆಯೂ ಸಹಾನುಭೂತಿ ಹೊಂದಿರುವ ರಾಜ್ಯ ಸರ್ಕಾರವು, ತಲಾ ಮೂರು ಲಕ್ಷ ರೂಪಾಯಿಗಳ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರಕುವಂತೆ ಕ್ರಮವಹಿಸುವುದಾಗಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌ ಭರವಸೆ ನೀಡಿದ್ದಾರೆ.

ಇನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ದುಡಿಯುವ ಜನ ಮೃತಪಟ್ಟಿದ್ದು ಅತೀವ ದುಃಖದ ಸಂಗತಿ. ಇದು ದೊಡ್ಡ ಅನಾಹುತ ಎಂದು ದುಃಖ ವ್ಯಕ್ತಪಡಿಸಿದರು.

ಮೃತಪಟ್ಟ 7 ಮಂದಿ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಸರ್ಕಾರದಿಂದ ನೀಡಲಾಗುವುದು. ಅಲ್ಲದೇ, ಜಿಲ್ಲಾಡಳಿತದಿಂದ ಕೂಡ ತಲಾ 2 ಲಕ್ಷ ರೂ. ಕೊಡಲು ಸೂಚಿಸಿದ್ದೇನೆ. ಘಟನೆಯಲ್ಲಿ ಗಾಯಗೊಂಡವರಿಗೂ ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಚಿಕಿತ್ಸೆ ಕೊಡಿಸಲಾಗುವುದು ಎಂದರು.