ನೈರೋಬಿ : ಕೀನ್ಯಾದ ಕ್ವಾಲೆಯಲ್ಲಿ 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದ್ದು , ಎಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮಂಗಳವಾರ (ಅ.28) 5Y-CCA ಸಂಖ್ಯೆಯ ವಿಮಾನವು ಡಯಾನಿಯಿಂದ ಕಿಚ್ವಾ ಟೆಂಬೊಗೆ ತೆರಳುತ್ತಿತ್ತು. ವಿಮಾನದಲ್ಲಿ 12 ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಈ ವೇಳೆ ಸುಮಾರಿಗೆ 0530Z ಎಂಬಲ್ಲಿ ಪತನಗೊಂಡಿದೆ ಎಂದು ಕೀನ್ಯಾ ನಾಗರಿಕ ವಿಮಾನಯಾನ ಪ್ರಾಧಿಕಾರ ದೃಢಪಡಿಸಿದೆ.
ಈ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚುವಲ್ಲಿ ನಿರತರಾಗಿದ್ದಾರೆ. ಹವಾಮಾನ ಸ್ಥಿತಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಕಿಚ್ವಾ ಟೆಂಬೊಗೆ ಬೆಳಿಗ್ಗೆ 9 ಗಂಟೆಗೆ ತಲುಪಬೇಕಿದ್ದ ವಿಮಾನದಲ್ಲಿ ಮಸಾಯಿ ಮಾರಾಗೆ ತೆರಳುತ್ತಿದ್ದ ಪ್ರವಾಸಿಗರಿದ್ದರು ಎಂದು ಮೂಲಗಳು ತಿಳಿಸಿವೆ.















