ಬೆಂಗಳೂರು : ಹಾಸಿಗೆ, ದಿಂಬು ಕೇಳಿದ್ದ ದರ್ಶನ್ಗೆ ಕೋರ್ಟ್ ಡಬಲ್ ಶಾಕ್ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ 57ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.
ಪರಪ್ಪನ ಅಗ್ರಹಾರದಲ್ಲಿರುವ ಕ್ವಾರಂಟೈನ್ ಸೆಲ್ನಿಂದ ಮುಖ್ಯ ಸೆಲ್ಗೆ ವರ್ಗಾವಣೆ ಕೋರಿದ ವಿಚಾರಕ್ಕೆ ಸಂಬಂಧಿಸಿದಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಅವಕಾಶ ನೀಡಿದೆ.
ರೇಣುಕಾಸ್ವಾಮಿ ಪ್ರಕರಣದ ಶೀಘ್ರ ವಿಚಾರಣೆ ಕೋರಿದ ಎಸ್ಪಿಪಿ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಅ.31 ರಂದು ದೋಷಾರೋಪ ನಿಗದಿಗೆ ಕೋರ್ಟ್ ಸೂಚನೆ ನೀಡುವ ಮೂಲಕ ದರ್ಶನ್ಗೆ ಡಬಲ್ ಶಾಕ್ ಕೊಟ್ಟಿದೆ.
ದರ್ಶನ್ ಮತ್ತು ಪವಿತ್ರ ಗೌಡ ಸೇರಿದಂತೆ 6 ಜನ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಹಾಜರಾಗಿದ್ದರೆ ಉಳಿದ ಆರೋಪಿಗಳು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಿದ್ದರು.














