ಮನೆ ರಾಜ್ಯ ಅಂಜನಾದ್ರಿ ಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಕುಟುಂಬ ಭೇಟಿ

ಅಂಜನಾದ್ರಿ ಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಕುಟುಂಬ ಭೇಟಿ

0

ಗಂಗಾವತಿ (ಕೊಪ್ಪಳ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಸೋಮವಾರ ಭೇಟಿ ನೀಡಿ, ದರ್ಶನ ಪಡೆದರು.

ಅಂಜನಾದ್ರಿ ಬೆಟ್ಟದ‌ 545 ಮೆಟ್ಟಿಲುಗಳನ್ನು ಹತ್ತಿ ದರ್ಶನ ಪಡೆದು,  ನಂತರ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಿ ಕೆಳಗಿಳಿದರು.

ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ವೆಂಕಟೇಶ ಮಡಿವಾಳ, ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಇದ್ದರು‌.