ಬಾಗಲಕೋಟೆ : ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಶಾಸಕ ಮೇಟಿ ಅವರ ಆರೋಗ್ಯ ವಿಚಾರಿಸಿದ್ದರು, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದರು.















