ಮನೆ ಕಾನೂನು ಜಯಲಲಿತಾ ಅವರ ಸೀರೆ, ಚಪ್ಪಲಿ ಹರಾಜಿಗೆ ನೀಡಿ: ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ...

ಜಯಲಲಿತಾ ಅವರ ಸೀರೆ, ಚಪ್ಪಲಿ ಹರಾಜಿಗೆ ನೀಡಿ: ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ ವಕೀಲ

0

ಬೆಂಗಳೂರು(Bengaluru): ಕರ್ನಾಟಕದಲ್ಲಿರುವ ಜಯಲಲಿತಾ ಅವರ ಸೀರೆ, ಚಪ್ಪಲಿ ಹಾಗೂ ಶಾಲುಗಳನ್ನು ಹರಾಜಿಗೆ ಇಡುವಂತೆ ಕರ್ನಾಟಕದ ವಕೀಲ ನರಸಿಂಹ ಮೂರ್ತಿ ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.

ತಮಿಳುನಾಡಿನ ಮಾಜಿ ಸಿಎಂ ದಿವಂಗತೆ ಜಯಲಲಿತಾ ಮೃತರಾಗಿ ಇಂದಿಗೆ 6 ವರ್ಷವಾಗಿದ್ದು, ಅವರು 1991-96ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ವಕೀಲ ಸುಬ್ರಮಣಿಯಮ್ ಸ್ವಾಮಿ ದೂರು ನೀಡಿದ್ದರು. CBI 1997ರಲ್ಲಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಅಕ್ರಮ ಆಸ್ತಿಯನ್ನು ಜಪ್ತಿ ಮಾಡಲಾಯಿತು. ರಾಷ್ಟ್ರೀಯ ಸಂಪತ್ತು ಎಂದು ಘೋಷಣೆ ಮಾಡಿ ಕರ್ನಾಟಕದ ಖಜಾನೆಯಲ್ಲಿ ಇಡಲಾಯಿತು.

ಜಯಲಲಿತಾ ಅವರ ಸೀರೆ, ಚಪ್ಪಲಿ ಎಷ್ಟಿದೆ ?

ವಿಧಾನಸೌಧದ ಖಜಾನೆಯಲ್ಲಿ ಜಯಲಲಿತಾರ 11,344 ಸೀರೆ, 750 ಜೊತೆ ಚಪ್ಪಲಿ ಮತ್ತು 250 ಶಾಲುಗಳಿವೆ. ಇದನ್ನು ಹರಾಜಿಗೆ ಇಟ್ಟರೆ ಅವರ ಅಭಿಮಾನಿಗಳು ಒಂದು ಸಾವಿರ ದಿಂದ ಹತ್ತು ಸಾವಿರ ರೂ. ಹಣ ನೀಡಿ ಕೊಂಡುಕೊಳ್ಳುತ್ತಾರೆ. ಇದರಿಂದ ಸರ್ಕಾರಕ್ಕೆ ಆದಾಯ ಬರುತ್ತದೆ. ಹಾಗಾಗಿ ಹರಾಜಿಗೆ ನಿರ್ದೇಶನ ನೀಡುವಂತೆ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದೇನೆ ಎಂದು ವಕೀಲ ನರಸಿಂಹಮೂರ್ತಿ ಹೇಳಿದ್ದಾರೆ.