ಮೈಸೂರು : ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಈ ಮೂಲಕ ಕಳೆದ 15 ದಿನಗಳಲ್ಲಿ ಒಟ್ಟು ಮೂರು ರೈತರು ಹುಲಿ ದಾಳಿಗೆ ಬಲಿಯಾಗಿರುವುದು ಕಂಡುಬಂದಿದೆ. ಮೈಸೂರು ಜಿಲ್ಲೆಯಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ತಾರಕಕ್ಕೇರುತ್ತಿದೆ. ಒಂದೇ ತಿಂಗಳಲ್ಲಿ ಒಟ್ಟು ಮೂವರು ರೈತರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಇನ್ನೊಬ್ಬ ರೈತ ಹುಲಿ ದಾಳಿಯಿಂದ ಗಾಯಗೊಂಡ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇ ಹೆಗ್ಗೂಡಿಲು ಗ್ರಾಮದಲ್ಲಿಂದು ರೈತ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಜಮೀನಿನಲ್ಲಿ ಉಳುಮೆಗೆ ತೆರಳಿದ್ದ ರೈತನ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದ ಪರಿಣಾಮ 52 ವರ್ಷದ ದಂಡನಾಯಕ ಮೃತಪಟ್ಟಿದ್ದಾರೆ. ಹುಲಿ ಜಮೀನಿನಲ್ಲಿ ರೈತನನ್ನು ಕೊಂದು ಅರ್ಧ ಕಿಲೋಮೀಟರ್ ದೂರ ಎಳೆದುಕೊಂಡು ಹೋಗಿ ರೈತನ ತೊಡೆ, ತಲೆ ಭಾಗ ತಿಂದಿದ್ದೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಈ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯಲ್ಲಿ ಒಂದು ತಿಂಗಳ ಅಂತರದಲ್ಲಿ 4ನೇ ಹುಲಿ ದಾಳಿ ಪ್ರಕರಣ ಇದ್ದಾಗಿದ್ದು, ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕುಗಳಲ್ಲಿ ನಿರಂತರವಾಗಿ ಹುಲಿ ದಾಳಿ ನಡೆಯುತ್ತಿದ್ದು ತಾಲ್ಲೂಕಿನ ಜನರು ಕಂಗಾಲಾಗಿದ್ದಾರೆ.
ಹುಲಿ ದಾಳಿಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಆರ್‌ಎಫ್‌ಓ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಆರ್‌ಎಫ್‌ಓ ಅಮೃತಾ ಮೇಲೆ ಗ್ರಾಮಸ್ಥರು ಹಲ್ಲೆಗೆ ಯತ್ನಿಸಿದ ಘಟನೆ ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ನಡೆದಿದೆ. ಹುಲಿ ದಾಳಿಯಿಂದ ರೈತ ದಂಡನಾಯಕ ಮೃತ ಪಟ್ಟಿದ್ದ ಕಾರಣ ಘಟನಾ ಸ್ಥಳಕ್ಕೆ ಬಂದಿದ್ದ ಅಮೃತಾ ಅವರ ಮೇಲೆ ಗ್ರಾಮಸ್ಥರು ಆಕ್ರೋಶ ಹೊರಹಾಕಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.














