ಮನೆ ರಾಜ್ಯ ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು- ಹಾಸನ ಹೆದ್ದಾರಿಯಲ್ಲಿ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

0

ನೆಲಮಂಗಲ : ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ಈ ಘಟನೆ ನಡೆದಿದೆ.

ಬೆಂಗಳೂರು ಮಾರ್ಗವಾಗಿ ಹಾಸನ ಕಡೆ ಸಾಗುವ ವೇಳೆ ಅಪಘಾತ ನಡೆದಿದ್ದು. ಅತೀ ವೇಗದಲ್ಲಿ ಬಂದು ರಸ್ತೆಯ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸುರುವ ಸಾಧ್ಯತೆಯಿದೆ. ಈ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸಾವನ್ನಪ್ಪಿದ ಇಬ್ಬರು ಯುವಕರ ಬಗ್ಗೆ ವಿವರ ಲಭ್ಯವಾಗಿಲ್ಲ. ಮೃತದೇಹಗಳನ್ನು ಈಗ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.