ನವದೆಹಲಿ (New Delhi): ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಾಧವನ್ ವಿರುದ್ಧ ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯೋಗ ಮತ್ತು ಮದುವೆಯ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಸಂತ್ರಸ್ತೆ ಮಹಿಳೆಯ ಪತಿ ಕಾಂಗ್ರೆಸ್ ಕಚೇರಿಯಲ್ಲಿ ಹೋರ್ಡಿಂಗ್ ಗಳನ್ನು ಹಾಕುತ್ತಿದ್ದರು ಎನ್ನಲಾಗಿದೆ. 2020 ರಲ್ಲಿ ಮಹಿಳೆಯ ಪತಿ ನಿಧರಾದ ಬಳಿಕ ಮಾಧವನ್ ಅವರು ಮದುವೆಯ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಜೂನ್ 26 ರಂದು ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಮಹಿಳೆಯನ್ನು ದೆಹಲಿಯ ಡಿಡಿಯು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಮಹಿಳೆ ದೂರಿನ ಪ್ರಕಾರ 2022ರ ಫೆಬ್ರವರಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.