ಮನೆ ರಾಜ್ಯ ರಾಜ್ಯದಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 617 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,65,452ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.  ಹೀಗಾಗಿ ಸಾವಿನ ಸಂಖ್ಯೆ 40072 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

767 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,21,050ಕ್ಕೆ ಏರಿಕೆಯಾಗಿದೆ. ಇನ್ನು 4288 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 592 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,00,415ಕ್ಕೆ ಏರಿಕೆಯಾಗಿದೆ.