ಮನೆ ಅಂತಾರಾಷ್ಟ್ರೀಯ ಸೌದಿ ಅರೇಬಿಯಾ ಭೀಕರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

ಸೌದಿ ಅರೇಬಿಯಾ ಭೀಕರ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ

0

ನವದೆಹಲಿ : ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ, ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ 42 ಭಾರತೀಯ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಮೆಕ್ಕಾದಿಂದ ಮದೀನಾಕ್ಕೆ ಹೊರಟಿದ್ದ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ಸುದ್ದಿ ತಿಳಿದು, ಅತೀವ ನೋವಾಗಿದೆ. ಈ ಅವಘಡದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.

ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಿ. ರಿಯಾದ್‌ನಲ್ಲಿರುವ ನಮ್ಮ ರಾಯಭಾರಿ ಕಚೇರಿ ಹಾಗೂ ಜೆಡ್ಡಾದ ರಾಯಭಾರಿ ಕಚೇರಿಯು ಎಲ್ಲ ರೀತಿಯ ಸಹಾಯ ಮಾಡಲಿದೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.