ಮನೆ ರಾಷ್ಟ್ರೀಯ ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿಗೆ ಗಾಯ

ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿಗೆ ಗಾಯ

0

ಮುಂಬೈ (Mumbai): ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು 8 ಮಂದಿ ಗಾಯಗೊಂಡಿರುವ ಘಟನೆ ಕುರ್ಲಾ ಪ್ರದೇಶದಲ್ಲಿ ನಡೆದಿದೆ.

ಕುರ್ಲಾ ಪ್ರದೇಶದ ನಾಯಕ್ ನಗರ ಸೊಸೈಟಿಯಲ್ಲಿರುವ ಕಟ್ಟಡದ ಒಂದು ಭಾಗ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ.

ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. 8 ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಸಮೀಪದ ರಾಜವಾಡಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅವಶೇಷಗಳಡಿ ಇನ್ನೂ 20-25 ಮಂದಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ.