ಮನೆ ರಾಜ್ಯ ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್

ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್

0

ವಿಜಯಪುರ : ಸಿಗರೇಟ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಬ್ಲಾಸ್ಟ್ ಆಗಿ ಏಳು ಗೂಡಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರದ ಚಾಲುಕ್ಯ ನಗರದ ಎಸ್‌ಬಿಐ ಬ್ಯಾಂಕ್ ಬಳಿ ನಡೆದಿದೆ.

ಸಿಗರೇಟ್ ಕಿಡಿಯಿಂದ ಹೊತ್ತಿದ ಬೆಂಕಿಗೆ, ಟೀ ಕಾಫಿ, ಫುಡ್ ಸ್ಟಾಲ್, ವಡಾಪಾವ್ ಶಾಪ್‌ಗಳು ಭಸ್ಮವಾಗಿದ್ದು, ಗೂಡಂಗಡಿಗಳಲ್ಲಿದ್ದ ಗ್ಯಾಸ್ ಸಿಲೆಂಡರ್‌ಗಳು ಬ್ಲಾಸ್ಟ್ ಆಗಿವೆ. ಗೂಡಂಗಡಿಗೆ ಹೊತ್ತಿಕೊಂಡ ಬೆಂಕಿ ಪಕ್ಕದ ಮನೆಗೂ ವ್ಯಾಪಿಸಿದೆ. ಬ್ಲಾಸ್ಟ್ ಆದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಮೈಝುಮ್ ಎನ್ನುವಂತಿದೆ.

ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಸ್ಥಳದಲ್ಲಿ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಬೀಡು ಬಿಟ್ಟಿದ್ದು, ಪ್ರಕರಣ ದಾಖಲಾಗಿದೆ.