ಮನೆ ರಾಜ್ಯ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ ನೋಟಿಸ್‌

0

ನವದೆಹಲಿ : 2023ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ, ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠವು, ಸಿಎಂ ಸಿದ್ದರಾಮಯ್ಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್‌ ನೀಡಿದೆ. ಕೆ. ಶಂಕರ್ ಎಂಬವರು ಮೇಲ್ಮನವಿ ಸಲ್ಲಿಸಿದ್ದರು. ಚುನಾವಣಾ ಅಕ್ರಮ ನಡೆಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆರೋಪಿಸಲಾಗಿತ್ತು.

1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಬಂಧನೆಯ ಅಡಿಯಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದರು. ಶಂಕರ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.