ಮನೆ ರಾಜ್ಯ ಡಿನ್ನರ್‌ ಪಾಲಿಟಿಕ್ಸ್‌ – ಶಾಸಕರ ಜೊತೆ ಡಿಕೆಶಿ ಡಿನ್ನರ್‌ ಸಭೆ..!

ಡಿನ್ನರ್‌ ಪಾಲಿಟಿಕ್ಸ್‌ – ಶಾಸಕರ ಜೊತೆ ಡಿಕೆಶಿ ಡಿನ್ನರ್‌ ಸಭೆ..!

0

ಬೆಳಗಾವಿ : ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್‌ ತೀವ್ರಗೊಂಡಿದ್ದು ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ತಮ್ಮ ಆಪ್ತರ ಜೊತೆ ಸಭೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕರ ಜೊತೆ ಸಭೆ ನಡೆಸಿದ್ದರು. ತಮ್ಮ ಆಪ್ತ ಗಣಿ ಉದ್ಯಮಿ ದೊಡ್ಡಣ್ಣವರ್ ಅವರ ಫಾರ್ಮ್‌ ಹೌಸ್‌ನಲ್ಲಿ ಆಪ್ತ ಸಚಿವರು, ಶಾಸಕರ ಜೊತೆ ಡಿಕೆಶಿ ಸಭೆ ನಡೆಸಿದ್ದಾರೆ. ಡಿಕೆಶಿ ಸಹೋದರ ಡಿಕೆ ಸುರೇಶ್‌ ಅವರು ಈ ಡಿನ್ನರ್‌ ವ್ಯವಸ್ಥೆ ಮಾಡಿದ್ದರು.

ಈ ಡಿನ್ನರ್‌ ಸಭೆಯಲ್ಲಿ ಐದಕ್ಕೂ ಹೆಚ್ಚು ಸಚಿವರು, 40ಕ್ಕೂ ಹೆಚ್ಚು ಶಾಸಕರು ಸೇರಿದಂತೆ ಆಪ್ತರು ಭಾಗಿಯಾಗಿದ್ದರು. ಸಿಎಂ ಬಣದವರಿಗೆ ಆಹ್ವಾನ ನೀಡದೇ ಡಿಕೆಶಿ ಆಪ್ತರು ಮಾತ್ರ ಈ ಡಿನ್ನರ್‌ನಲ್ಲಿ ಪಾಲ್ಗೊಂಡಿದ್ದರು.

ಎಂ.ಸಿ ಸುಧಾಕರ್, ಮಂಕಾಳ ವೈದ್ಯ, ಕೆ.ಎಚ್. ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್, ಡಿ.ಕೆ.ಸುರೇಶ್, ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ, ಶಾಸಕ ಬಾಬಾಸಾಹೇಬ್ ಪಾಟೀಲ್, ಶಿವರಾಂ ಹೆಬ್ಬಾರ್, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್ ಮಾನೆ, ಎನ್‌ಎ ಹ್ಯಾರೀಸ್, ಇಕ್ಬಾಲ್ ಹುಸೇನ್, ಗಣೇಶ್ ಹುಕ್ಕೇರಿ, ಎಸ್ ಟಿ ಸೋಮಶೇಖರ್, ಎಂಎಲ್‌ಸಿ ರವಿ, ಸೇರಿ 40ಕ್ಕೂ ಹೆಚ್ಚು ಶಾಸಕರು, ಸಚಿವರು ಭಾಗಿಯಾಗಿದ್ದರು.