ಮನೆ ರಾಜ್ಯ ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್‌ ಸುಟ್ಟು ಕರಕಲು..!

ಲಾರಿಗೆ ಆಕಸ್ಮಿಕ ಬೆಂಕಿ – 40 ಬೈಕ್‌ ಸುಟ್ಟು ಕರಕಲು..!

0

ಬಳ್ಳಾರಿ : ಯಮಹ ಕಂಪನಿಯ ಬೈಕ್‌ಗಳನ್ನು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿದ ಘಟನೆ ಬಳ್ಳಾರಿ ನಗರದ ಅನಂತಪುರ ರಸ್ತೆಯ ಆಟೋನಗರದಲ್ಲಿ ನಡೆದಿದೆ.

ಬೆಂಕಿಯ ಕೆನ್ನಾಲಿಗೆಗೆ ಸಿಕ್ಕು ಲಾರಿಯಲ್ಲಿದ್ದ 45 ಲಕ್ಷ ರೂ. ಮೌಲ್ಯದ 40 ಬೈಕ್‌ಗಳು ಸುಟ್ಟು ಕರಕಲಾಗಿವೆ. ರಸ್ತೆ ಬದಿ ನಿಂತಿದ್ದ, ಲಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಲಾರಿಯಲ್ಲೇ ಕುಳಿತಿದ್ದ ಚಾಲಕ ಕೂಡಲೇ ಎಚ್ಚೆತ್ತುಕೊಂಡು ಲಾರಿಯಿಂದ ಕೆಳಗೆ ಇಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಚೆನ್ನೈನಿಂದ ಬೈಕ್‌ಗಳನ್ನು ಹೊತ್ತಿದ್ದ ಲಾರಿ ಬಳ್ಳಾರಿಗೆ ಬಂದಿತ್ತು. ಆದರೆ ಶೋರೂಂಗೆ ಹೋಗುವ ಮೊದಲೇ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಲಾರಿಯಲ್ಲಿದ್ದ ಬೈಕ್‌ಗಳು ಸುಟ್ಟು ಕರಕಲಾಗಿದ್ದವು. ಈ ಘಟನೆಗೆ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.