ಮನೆ ರಾಷ್ಟ್ರೀಯ ಆಗಸ್ಟ್‌ 6ಕ್ಕೆ ಉಪರಾಷ್ಟ್ರಪತಿ ಚುನಾವಣೆ

ಆಗಸ್ಟ್‌ 6ಕ್ಕೆ ಉಪರಾಷ್ಟ್ರಪತಿ ಚುನಾವಣೆ

0

ನವದೆಹಲಿ (New Delhi): ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ. ಚುನಾವಣೆ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರ ಸಭೆಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

ಆಗಸ್ಟ್‌ 6 ರಂದು ಚುನಾವಣೆ ನಿಗದಿಯಾಗಿದ್ದು, ಜುಲೈ 5ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಚುನಾವಣೆ ಆಗಸ್ಟ್ 6 ರಂದು ನಡೆಯಲಿದ್ದು, ಅಂದೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಲೋಕಸಭಾ, ರಾಜ್ಯಸಭಾ ಸದಸ್ಯರು (ನಾಮ ನಿರ್ದೇಶಿತ ಸದಸ್ಯರೂ ಸೇರಿ) ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವರು. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್‌ 10ಕ್ಕೆ ಕೊನೆಗೊಳ್ಳಲಿದೆ.