ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೇಸ್ನಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಣೆ ಮಾಡಿದೆ. ಈ ಹಿನ್ನೆಲೆ ಮಾಜಿ ಸಚಿವರಿಗೆ ಬಂಧನ ಭೀತಿ ಎದುರಾಗಿದೆ.
ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆಯನ್ನು ಬೈರತಿ ಬಸವರಾಜ್ ಮೇಲೆ ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಬಸವರಾಜ್ಗೆ ಈ ವಿಚಾರದಲ್ಲಿ ರಿಲೀಫ್ ಸಿಕ್ಕಿದೆ. ಆದರೆ, ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದ ಮಾಜಿ ಸಚಿವರಿಗೆ ಶಾಕ್ ಆಗಿದೆ.
ಹೈಕೋರ್ಟ್ನಲ್ಲಿಯೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ. ನಿಯಮಾನುಸಾರವಾಗಿ ಕೆಳಹಂತದ ನ್ಯಾಯಾಲಯದಲ್ಲಿಯೇ ನಿರೀಕ್ಷಣಾ ಜಾಮೀನು ಪಡೆದುಕೊಳ್ಳಬಹುದು. ನಿರೀಕ್ಷಣಾ ಜಾಮೀನು ತೀರ್ಮಾನ ಮಾಡೋದು ಕೆಳಹಂತದ ನ್ಯಾಯಾಲಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ಜಾಮೀನು ಸಿಗುವ ತನಕ ಮಧ್ಯಂತರ ರಕ್ಷಣೆಗೆ ಮನವಿಯನ್ನು ಹೈಕೋರ್ಟ್ ನಿರಾಕರಣೆ ಮಾಡಿದೆ.















