ಮನೆ ಸುದ್ದಿ ಜಾಲ 5 ಹುಲಿಗಳು ಪ್ರತ್ಯಕ್ಷ ಪ್ರಕರಣ – ನಿಷೇಧಾಜ್ಞೆ ಜಾರಿ, ಜನರಲ್ಲಿ ಭೀತಿ..!

5 ಹುಲಿಗಳು ಪ್ರತ್ಯಕ್ಷ ಪ್ರಕರಣ – ನಿಷೇಧಾಜ್ಞೆ ಜಾರಿ, ಜನರಲ್ಲಿ ಭೀತಿ..!

0

ಚಾಮರಾಜನಗರ : ನಂಜೇದೇವನಪುರ ಗ್ರಾಮದ ಬಳಿ 5 ಹುಲಿ ಪ್ರತ್ಯಕ್ಷವಾದ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನುಗಳಲ್ಲಿ ಹುಲಿ ಓಡಾಟ ನಡೆಸುತ್ತಿದೆ. ಹೀಗಾಗಿ ಈ ಪ್ರದೇಶಗಳಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಡ್ರೋನ್‌ನಲ್ಲೂ 5 ಹುಲಿಗಳು ಓಡಾಟ ನಡೆಸುತ್ತಿರುವ ದೃಶ್ಯ ಸೆರೆಯಾಗಿದೆ. ಹೀಗಾಗಿ ಸಾಕಾನೆಗಳಿಂದಲೂ ಕೂಂಬಿಂಗ್‌ಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ತಿದೆ. ನಿಂತು ಹೋದ ಕ್ವಾರಿಗಳನ್ನೇ ಟೈಗರ್ ಆವಾಸ ಸ್ಥಾನ ಮಾಡಿಕೊಂಡಿದ್ದು, ಹುಲಿಗಳನ್ನ ಡ್ರೈವ್ ಮಾಡೋದು ಬೇಡ ಸೆರೆಹಿಡಿಯುವಂತೆ ರೈತರು ಒತ್ತಾಯಿಸಿದ್ದಾರೆ.

ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಹುಲಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಂತರ ಈ ಮಾಹಿತಿಯನ್ನ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ಜೊತೆಗೆ ಹುಲಿ ಸೆರೆ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಡ್ರೋನ್‌ ಹಾಗೂ ಪಶುವೈದ್ಯರ ತಂಡ ಕಳಿಸಿಕೊಡುವಂತೆ ಮನವಿ ಮಾಡಿದ್ದಾರೆ. ಸದ್ಯಕ್ಕೆ ಒಂದೇ ಒಂದು ಥರ್ಮಲ್‌ ಈಗಲ್‌ ಡ್ರೋನ್‌ ಇದ್ದು, ಅದರಲ್ಲೇ ಹುಲಿಗಳಿರುವ ಸ್ಥಳ ಪತ್ತೆ ಕಾರ್ಯ ನಡೆಯುತ್ತಿದೆ ಅಂತ ಸಚಿವರಿಗೆ ವಿವರಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಈಶ್ವರ್‌ ಖಂಡ್ರೆ ಶೀಘ್ರವೇ ಹೆಚ್ಚುವರಿ ಡ್ರೋನ್‌, ವಿಶೇಷ ತಂಡ ಕಳಿಸಿಕೊಡೋದಾಗಿ ಭರವಸೆ ನೀಡಿದ್ದಾರೆ.