ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೂವರು ಸ್ನೇಹಿತೆಯರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಅದೃಷ್ಟವಶಾತ್ ಪಾರಾಗಿದ್ದಾರೆ. ಮೂವರು ಕೂಡ ಬೆಂಗಳೂರಿನ ಡಿಲೈಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ರಜೆಯಿರುವ ಹಿನ್ನೆಲೆ ಮೂವರು ಸೇರಿಕೊಂಡು ಗೋಕರ್ಣಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಮೂವರು ಪವಾಡ ಸೃದೃಶ್ಯ ಪಾರಾಗಿದ್ದಾರೆ. ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ, ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ.
ಲಾರಿ ಡಿಕ್ಕಿಯಿಂದಾಗಿ ಖಾಸಗಿ ಬಸ್ಸೊಂದು ಬೆಂಕಿಗಾಹುತಿಯಾಗಿ 9ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. ಗಾಯಾಳುಗಳನ್ನು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.















