ಮೈಸೂರು : ಹೀಲಿಯಂ ಗ್ಯಾಸ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ.
ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ನೆನ್ನೆ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ. ಬ್ಲಾಸ್ಟ್ ತೀವ್ರತೆಗೆ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.














