ತಿರುಪತಿ : ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು.
ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು. ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಮಲಕ್ಕೆ ಭೇಟಿ ನೀಡಿದರು.
ಟಿಟಿಡಿ ಅಧಿಕಾರಿಗಳೊಂದಿಗೆ ತಿರುಮಲದಲ್ಲಿರುವ ಕರ್ನಾಟಕ ಸರ್ಕಾರದ 3 ಅತಿಥಿ ಗೃಹಗಳು ಹಾಗೂ ಛತ್ರದ ಪರಿಶೀಲನೆ ನಡೆಸಿದರು.ಬಾಕಿ ಉಳಿದಿರುವ ಎಲ್ಲಾ ಸಮಸ್ಯೆ ಹಾಗೂ ಕಾಮಗಾರಿಗಳನ್ನು ಮಾರ್ಚ್ 2026ರೊಳಗೆ ಪೂರ್ಣ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.















