ಮೈಸೂರು : ಮೈಸೂರಿನ ಹುಣಸೂರು ಪಟ್ಟಣದಲ್ಲಿ ನೆನ್ನೆ ಹಾಡಹಗಲೇಯಲ್ಲಿ ಚಿನ್ನದಂಗಡಿ ದರೋಡೆ ನಡೆದಿದೆ. 5 ಕ್ಕೂ ಹೆಚ್ಚು ಜನರ ಗ್ಯಾಂಗ್ವೊಂದು ಏಕಾಏಕಿ ಚಿನ್ನದಂಗಡಿಗೆ ನುಗ್ಗಿ ಬರೋಬ್ಬರಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆ ಮಾಡಿರುವುದು ವರದಿಯಾಗಿದೆ.
ಹುಣಸೂರು ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ-ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ದರೋಡೆ ನಡೆದಿದೆ. ದರೋಡೆಕೋರರು ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ಮೌಲ್ಯದಷ್ಟು ಚಿನ್ನ-ವಜ್ರಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.















