ನವದೆಹಲಿ : ಉತ್ತರ ಪ್ರದೇಶದ ಉನ್ನಾವೋದಲ್ಲಿ ಅಪ್ರಾಪ್ರೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗಾರ್‌ಗೆ ವಿಧಿಸಿದ್ದ, ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯ ಮೇರೆಗೆ ಸೆಂಗಾರ್‌ಗೆ ಕೋರ್ಟ್ 4 ವಾರಗಳ ನೋಟಿಸ್ ಜಾರಿ ಮಾಡಿದೆ. ಉನ್ನಾವೋ ಅತ್ಯಾಚಾರ ಸಂತ್ರಸ್ತೆಯೂ ಮಧ್ಯಪ್ರವೇಶಿಸಲು ನ್ಯಾಯಾಲಯವು ಅವಕಾಶ ನೀಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅಮಾನತುಗೊಂಡಿದ್ದರೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್‌ಗೆ 10 ವರ್ಷಗಳ ಶಿಕ್ಷೆಯಾಗಿದೆ. ಹೀಗಾಗಿ ಅವರು ಜೈಲಿನಲ್ಲಿಯೇ ಇರಬೇಕು ಎಂದು ಕೋರ್ಟ್ ಹೇಳಿತ್ತು.
2017ರಲ್ಲಿ ನಡೆದಿದ್ದ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಡಿ.23 ರಂದು ಅಮಾನತುಗೊಳಿಸಿ ಜಾಮೀನು ನೀಡಿತ್ತು. ಜಾಮೀನು ನೀಡಿದ ವಿಚಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು ಎನ್ನಲಾಗಿದೆ.















