ಮಂಗಳೂರು : ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ.ಎಸ್.ಹೆಗ್ಡೆ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕ ಎನ್.ವಿನಯ್ ಹೆಗ್ಡೆ ವಯೋಸಹಜ ಕಾಯಿಲೆಯಿಂದ ಇಂದು ಮಂಗಳೂರಿನಲ್ಲಿ ನಿಧನರಾದರು. ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 8:30ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.ಹೆಗ್ಡೆ ಅವರ ದ್ವಿತೀಯ ಪುತ್ರ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರ ಸಹೋದರ.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದ ವಿನಯ್ ಹೆಗ್ಡೆ, ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞ ಎಂದು ಹೆಸರುವಾಸಿಯಾಗಿದ್ದರು.















