ಮನೆ ರಾಜ್ಯ ಬಿಬಿಎಂಪಿ ವಾರ್ಡ್ ವಿಂಗಡಣೆ:  2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಅರ್ಜಿ

ಬಿಬಿಎಂಪಿ ವಾರ್ಡ್ ವಿಂಗಡಣೆ:  2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಅರ್ಜಿ

0

ಬೆಂಗಳೂರು(Bengaluru): ಬಿಬಿಎಂಪಿ ವಾರ್ಡ್ ವಿಂಗಡಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಾವಿರಾರು ಆಕ್ಷೇಪಣೆ ಅರ್ಜಿಗಳು ಹರಿದುಬಂದಿವೆ.

ಕಾಂಗ್ರೆಸ್, ಜೆಡಿಎಸ್, ಎಎಪಿ, ಎಸ್​ಡಿಪಿಐ ಸೇರಿದಂತೆ ಹಲವು ಸಂಘ ಸಂಸ್ಥೆಗಳಿಂದ 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಅರ್ಜಿಗಳು ಅರ್ಜಿ ಸಲ್ಲಿಕೆಯಾಗಿವೆ.

ಅರ್ಜಿದಾರರು ವಾರ್ಡ್ ವಿಂಗಡಣೆ ಸರಿಯಿಲ್ಲ, ಇದರಲ್ಲಿ ಅಲ್ಪಸಂಖ್ಯಾತರನ್ನು ಗುರಿ ಮಾಡಲಾಗಿದೆ. ಕೆಲ ವಾರ್ಡ್ ಒಡೆದು ಬೇರೆ, ಬೇರೆ ವಾರ್ಡ್​​​​​ ಗಳಿಗೆ ಹಂಚಿಕೆ ಮಾಡಿದ್ದಾರೆ. ಬಿಜೆಪಿ ಪಕ್ಷ ಹೊರತುಪಡಿಸಿ ಅನ್ಯ ಪಕ್ಷಗಳ ವಾರ್ಡ್​​​ಗಳನ್ನು ಬೇಕಂತಲೇ ಮಾಡಿ ವಿಂಗಡಣೆ ಮಾಡಿದ್ದಾರೆ ಎಂದು ದೂರುಗಳಲ್ಲಿ ಉಲ್ಲೇಖಿಸಲಾಗಿದೆ.

ವಾರ್ಡ್ ವಿಂಗಡಣೆ ಹೆಸರಲ್ಲಿ ಬಿಜೆಪಿ ತನ್ನ ಅನುಕೂಲಕ್ಕೆ ತಕ್ಕಂತೆ ವಿಂಗಡಿಸಿದೆ. ಒಂದೇ  ರಸ್ತೆಯನ್ನು ಎರಡು ವಾರ್ಡ್​ಗಳಿಗೆ ಹಂಚಿಕೆ ಮಾಡಿದ್ದಾರೆ. ಲೇಔಟ್​ಗಳನ್ನೂ ಎರಡು ಭಾಗ ಮಾಡಿ ವಿಂಗಡಿಸಿದ್ದಾರೆ. ಇತಿಹಾಸ ಇರುವ ಹೆಸರುಗಳನ್ನೂ ತೆಗೆದು ಹಾಕಿ ಒಂದು ಸಮುದಾಯಕ್ಕೆ ಸೇರಿದ ಹೆಸರುಗಳನ್ನು ಇಡಲಾಗಿದೆ. ಈ ರೀತಿ ವಿಂಗಡಣೆಯಿಂದ ಅನ್ಯಾಯವಾಗಿದೆ ಎಂದು ಹಲವರು ಆರೋಪಿಸಿದ್ದಾರೆ.

15 ದಿನಗಳ ಕಾಲಾವಕಾಶ: ನೂತನವಾಗಿ ರೂಪುಗೊಂಡ 243 ವಾರ್ಡ್ ವಿಂಗಡಣೆ ಸಂಬಂಧ ಸಾರ್ವಜನಿಕರು ಮುಕ್ತವಾಗಿ ಆಕ್ಷೇಪಣೆ ಸಲ್ಲಿಸಲು ಅರ್ಜಿ ಸಲ್ಲಿಸುವಂತೆ ಸರ್ಕಾರ ಈ ಹಿಂದೆ ಸೂಚಿಸಿತ್ತು. ಅದರಂತೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಆನ್​ಲೈನ್ ಮುಖಾಂತರ ಮತ್ತು ವಿಧಾನಸೌಧದ ಡಿಪಿಅರ್ ಕಚೇರಿಯಲ್ಲಿ ಅರ್ಜಿ ಸಲ್ಲಿಕೆಗೆ 15 ದಿನಗಳ ಆಕ್ಷೇಪಣೆಗೆ ಕಾಲವಾಕಾಶ ನೀಡಲಾಗಿತ್ತು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.