ಮನೆ ಸುದ್ದಿ ಜಾಲ ವಿಶೇಷಚೇತನರ ಪ್ರತಿಭೆ ಗುರುತಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು: ಶಾಸಕ ಎಲ್.ನಾಗೇಂದ್ರ

ವಿಶೇಷಚೇತನರ ಪ್ರತಿಭೆ ಗುರುತಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು: ಶಾಸಕ ಎಲ್.ನಾಗೇಂದ್ರ

0

ಮೈಸೂರು (Mysuru): ವಿಶೇಷ ಚೇತನರು ಎಲ್ಲದರಲ್ಲೂ ಮುಂದಿದ್ದು, ಪ್ರತಿಭೆ ಗುರುತಿಸಿ  ಅವರಲ್ಲಿ ಆತ್ಮವಿಶ್ವಾಸ ತುಂಬುವ ಅವಶ್ಯಕತೆ ಇದೆ ಎಂದು ಶಾಸಕ ಎಲ್ ನಾಗೇಂದ್ರ ಅಭಿಪ್ರಾಯಪಟ್ಟರು.

ಇಂದು ಸಮರ್ಥನಂ ಅಂಗವಿಕಲರ ಸಂಸ್ಥೆಯು ಬಾರ್ಕ್ಲೇಸ್ಸಹಕಾರದೊಂದಿಗೆ ನಗರದ ಕರ್ಜನ್ ಪಾರ್ಕ್ ನ ಡಾ.ಮರಿಗೌಡ ಸಭಾಂಗಣದಲ್ಲಿ ವಿಶೇಷ ಚೇತನರಿಗಾಗಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶೇಷ ಚೇತನರಿಗೆ ಆತ್ಮವಿಶ್ವಾಸದಿಂದ ಬದಕಲು ಸಮರ್ಥನಂ ಅಂಗವಿಕಲರ ಸಂಸ್ಥೆ  ಅಗತ್ಯ ಸಹಕಾರ ನೀಡುತ್ತಾ ಬಂದಿದ್ದಾರೆ. ಇವರು ವಿಶೇಷಚೇತನರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದಾರೆ ಇವರಿಗೆ ಸರ್ಕಾರದ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು.

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಾಲಿನಿ ಮಾತನಾಡಿ, ವಿಶೇಷಚೇತನರು ಸಾಮಾನ್ಯ ನಾಗರೀಕರಿಗಿಂತಲೂ ಹೆಚ್ಚು ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಯಾವುದೇ ಆತಂಕವಿಲ್ಲದೆ ಉತ್ಪಾದನಾ ಕ್ಷೇತ್ರದ ಕಾರ್ಖಾನೆಗಳಲ್ಲಿ ದುಡಿಯುತ್ತಿದ್ದಾರೆ.  ಕೋವಿಡ್ ಕಾರಣ ಎರಡು ವರ್ಷಗಳ ಕಾಲ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿಲ್ಲ ಇಂತಹ ಸಂದರ್ಭದಲ್ಲಿ ಸಮರ್ಥನಂ ಸಂಸ್ಥೆ ಉದ್ಯೋಗ ಮೇಳ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಉದ್ಯೋಗ ಮೇಳಕ್ಕೆ 22 ಕಂಪನಿಗಳು, 263 ಕ್ಕೂ ಅಧಿಕ ವಿಶೇಷಚೇತನ ಅಭ್ಯರ್ಥಿಗಳು ಭಾಗವಹಿಸಿದ್ದು, 147 ವಿಕಲಚೇತನರಿಗೆ ಸ್ಥಳದಲ್ಲೇ ಉದ್ಯೋಗ ದೊರಕಿದೆ. ಎರಡನೇ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಆಶ್ವಿನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನೀರ್ದೇಶಕ ಬಸವರಾಜು, ಸಮರ್ಥನಂ ಅಂಗವಿಕಲರ ಸಂಸ್ಥೆಯ ಟ್ರಸ್ಟಿ ವಸಂತಿ, ಮೈಸೂರು ವಿಭಾಗದ ಸಂಯೋಜಕ ಶಿವರಾಜು, ಸತೀಶ್ ನಾಯರ್, ಸುಭಾಶ್ ಚಂದ್ರ, ವೀರಭದ್ರಪಾಟೇಲ್, ಜೆಸ್ಟೀನ್ ಮತ್ತಿತರರು ಉಪಸ್ಥಿತರಿದ್ದರು.