ಮನೆ ರಾಜ್ಯ ದಕ್ಷಿಣ ಕನ್ನಡದಲ್ಲಿ ಮತ್ತೆ ಕಂಪಿಸಿದ ಭೂಮಿ

ದಕ್ಷಿಣ ಕನ್ನಡದಲ್ಲಿ ಮತ್ತೆ ಕಂಪಿಸಿದ ಭೂಮಿ

0

ಮಂಗಳೂರು (Mangalore): ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಧ್ಯರಾತ್ರಿ ಉಂಟಾದ ಭೀಕರ ಶಬ್ಧ ಮತ್ತು ಕಂಪನದಿಂದ ಜನತೆ ಭೀತಿಗೊಂಡಿದ್ದು, ಎಚ್ಚರಗೊಂಡಿದ್ದಾರೆ.

ಒಂದೇ ವಾರದಲ್ಲಿ 4ನೇ ಬಾರಿ ಭೂಕಂಪನದ ಅನುಭವವಾಗಿದೆ. ರಾತ್ರಿ 1.15 ರ ವೇಳೆಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಸಂಪಾಜೆ ಹಾಗೂ ಸಮೀಪದ ಪ್ರದೇಶ, ಸುಳ್ಯ ನಗರ ಸೇರಿ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದೆ.

ಗುತ್ತಿಗಾರು, ತೊಡಿಕಾನ, ಉಬರಡ್ಕ, ಅರಂತೋಡು, ಸಂಪಾಜೆ ಸೇರಿದಂತೆ ಎಲ್ಲಾ ಕಡೆ ಭೂಮಿ‌ ಕಂಪಿಸಿದೆ. ಇದೀಗ ವಾರದಲ್ಲಿ ನಾಲ್ಕನೇ ಬಾರಿ ಭೂ ಕಂಪನ ಉಂಟಾಗಿದ್ದು, ಜನರ ಆತಂಕ ಹೆಚ್ಚಿಸಿದೆ. ಜೂ.25 ರಂದು ಬೆಳಿಗ್ಗೆ 9.10 ಕ್ಕೆ 2.3 ತೀವ್ರತೆಯ ಭೂ ಕಂಪನ ಆಗಿತ್ತು. ಜೂ.28 ರಂದು ಎರಡು ಬಾರಿ ಭೂಮಿ ನಲುಗಿತ್ತು. ಬೆಳಿಗ್ಗೆ ರಿಕ್ಟರ್ ಸ್ಕೇಲ್‌ನಲ್ಲಿ 3 ತೀವ್ರತೆಯ ಹಾಗು ಸಂಜೆ 1.8 ತೀವ್ರತೆಯ ಕಂಪನ ಉಂಟಾಗಿತ್ತು.

ನಿರಂತರವಾಗಿ ಭೂಕಂಪನವಾಗುತ್ತಿರುವುದು ಹಾಗೂ ಭಾರಿ ಮಳೆ ಕೂಡ ಆಗುತ್ತಿರುವುದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ.