ಮನೆ ರಾಜ್ಯ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ

0

ನವದೆಹಲಿ(New Delhi): ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಜುಲೈ 1 ಶುಕ್ರವಾರ 198 ರೂಪಾಯಿ ಇಳಿಕೆಯಾಗಿದೆ.

ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2219 ರೂ.ಗಳಿಂದ 2021 ರೂಪಾಯಿಗೆ ಇಳಿಕೆಯಾಗಿದೆ.

ಕೋಲ್ಕತ್ತಾದಲ್ಲಿ ಕಮರ್ಷಿಯಲ್ ಸಿಲಿಂಡರ್ ಬೆಲೆ 182 ರೂಪಾಯಿ ಇಳಿಕೆಯಾಗಿದೆ. ಮತ್ತೊಂದೆಡೆ ಮುಂಬೈನಲ್ಲಿ 190 ರೂಪಾಯಿ 50 ಪೈಸೆ ಮತ್ತು ಚೆನ್ನೈನಲ್ಲಿ 187 ರೂಪಾಯಿ ಇಳಿಕೆಯಾಗಿದೆ. ಪೆಟ್ರೋಲಿಯಂ ಕಂಪನಿ ಇಂಡಿಯನ್ ಆಯಿಲ್ ಸಹ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. 

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿಲ್ಲ. 14.2 ಕೆಜಿ ದೇಶೀಯ ಸಿಲಿಂಡರ್ ಬೆಲೆ ಅಗ್ಗವಾಗಿಲ್ಲ. ಕಳೆದ ಮೇ 19ರ ದರ ಹಾಗೆಯೇ ಮುಂದುವರಿದಿದೆ.

ಮೇ 7 ರಂದು ಮೊದಲ ಬಾರಿಗೆ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯನ್ನು ಲೀಟರ್‌ಗೆ 50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು, ಮೇ 19 ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿತ್ತು.

ಕಳೆದ ತಿಂಗಳು ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 1,003 ರೂ.ಗೆ ಹೆಚ್ಚಿಸಲಾಯಿತು – ಇದು ಒಂದು ತಿಂಗಳಲ್ಲಿ ಸತತ ಎರಡನೇ ಹೆಚ್ಚಳವಾಗಿದೆ.