ಮನೆ ರಾಜ್ಯ ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಬಂಧನ..!

ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಬಂಧನ..!

0

ಬೆಂಗಳೂರು : ಪಿಯುಸಿ ಓದುತ್ತಿದ್ದ, ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರ್‌ಟಿ ನಗರ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ಒಬ್ಬರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಕಾನ್ಸ್‌ಟೇಬಲ್‌ ಫ್ರೀಡಂ ಪಾರ್ಕ್‌ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಈ ವೇಳೆ, ಪ್ರಥಮ ಪಿಯುಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಉಪ್ಪಾರಪೇಟೆ ಠಾಣೆ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿತ ಕಾನ್ಸ್‌ಟೇಬಲ್‌ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.