ಚಾಮರಾಜನಗರ : ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹನೂರು ತಹಸೀಲ್ದಾರ್ ಚೈತ್ರಾ ಆದೇಶ ಹೊರಡಿಸಿದ್ದಾರೆ.
ಜಾಮೀನಿನ ಮೇಲೆ ಜೈಲಿನಿಂದ ಇಮ್ಮಡಿ ಮಹದೇವಸ್ವಾಮಿ ಹೊರ ಬಂದಿದ್ದಾರೆ. ಸಾಲೂರು ಮಠದಲ್ಲಿ ನಡೆಯಲಿರುವ ಪಟ್ಟದ ಮಹದೇವಸ್ವಾಮೀಜಿಯ 32 ನೇ ಸಂಸ್ಮರಣೋತ್ಸವದಲ್ಲಿ ಭಾಗವಹಿಸಲು ಆರೋಪಿ ಇಮ್ಮಡಿ ಮಹದೇವಸ್ವಾಮಿ ಮುಂದಾಗಿದ್ದರು. ಆರೋಪಿ ಭಾಗವಹಿಸಿದರೆ, ಪ್ರತಿಭಟನೆ ಮಾಡುವುದಾಗಿ ಸಂತ್ರಸ್ತರು ಹಾಗೂ ದಲಿತ ಸಂಘಟನೆಗಳು ಎಚ್ಚರಿಕೆ ನೀಡಿದ್ದರು. ಸಾಲೂರು ಮಠದ ಆವರಣ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಪೊನ್ನಾಚಿ ಮಹದೇವಸ್ವಾಮಿ ಮನವಿ ಮಾಡಿದ್ದರು.
ಸಾಲೂರು ಮಠದ ಮಹದೇಶ್ವರಸ್ವಾಮಿ ಎಜುಕೇಶನ್ ಸೊಸೈಟಿಯ ಸದಸ್ಯರಾಗಿದ್ದಾರೆ. ಇಮ್ಮಡಿ ಮಹದೇವಸ್ವಾಮಿ ಭಾಗಹಿಸಿದರೆ ಗಲಭೆ, ಶಾಂತಿಭಂಗ ಉಂಟಾಗುವ ಸಾಧ್ಯತೆಯಿದೆ. ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮುಂದಿನ ಆದೇಶದವರೆಗೂ ಮಹದೇಶ್ವರ ಬೆಟ್ಟಕ್ಕೆ ಆರೋಪಿಗೆ ಪ್ರವೇಶ ನಿಷೇಧಿಸಲಾಗಿದೆ.















