ಮುಂಬೈ : ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿತು. ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದರು.
ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಅಂತ್ಯ ಸಂಸ್ಕಾರದ ವೇಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಕಣ್ಣೀರಿಟ್ಟಿರು. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ ಅಗಲಿದ ತಮ್ಮ ಪ್ರೀತಿಯ ʻದಾದʼನಿಗೆ ಗೌರವ ನಮನ ಸಲ್ಲಿಸಿದರು. ಅಲ್ಲದೇ ಬೆಳಗ್ಗೆ 9 ಗಂಟೆಗೆ ವಿದ್ಯಾ ಪ್ರತಿಷ್ಠಾನ ಕ್ಯಾಂಪಸ್ ನಿಂದ 11 ಗಂಟೆವರೆಗೂ ಅವರ ಪಾರ್ಥಿವ ಶರೀರವನ್ನು ಮೆರವಣಿ ಮಾಡಲಾಯಿತು. ಬಳಿಕ ಬಾರಾಮತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.















