ಮನೆ ರಾಜ್ಯ ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡ್ರು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ..!

ಐಟಿ ದಾಳಿಗೆ ಹೆದರಿ ಶೂಟ್ ಮಾಡಿಕೊಂಡ್ರು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ..!

0

ಬೆಂಗಳೂರು : ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ನಡೆದಿದೆ.

ಇಂದು (ಜ.30) ಕಾನ್ಫಿಡೆಂಡ್ ಗ್ರೂಪ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ರೀತಿ ಕಳೆದ ಮೂರು ವರ್ಷಗಳಿಂದ ಐಟಿ ದಾಳಿ ನಡೆಯುತ್ತಿತ್ತು. ಇದರಿಂದ ಬೇಸತ್ತಿದ್ದ ಉದ್ಯಮಿ ಇಂದು ದಾಳಿ ವೇಳೆ ಪಿಸ್ತೂಲಿನಿಂದ ಶೂಟ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಕುರಿತು ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಎಂ ಹಾಕೆ ಅವರು ಐಟಿ ಅಧಿಕಾರಿಗಳ ಬಳಿ ಮಾಹಿತಿ ಕಲೆಹಾಕುತ್ತಿದ್ದಾರೆ ಎನ್ನಲಾಗಿದೆ.

ಕೇರಳ ಮೂಲದ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಸಿಇಓ ಸಿ.ಜೆ ರಾಯ್ ಅವರು ಶುಕ್ರವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ ಪದೇ ಪದೇ ಆದ ದಾಳಿಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ನಗರದಲ್ಲಿ ಇವರ ಹೆಸರಿನಲ್ಲಿ ಹಲವು ದೊಡ್ಡ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಇದ್ದವು. ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸಿ.ಜೆ. ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಮತ್ತು ಸಂಸ್ಥಾಪಕರಾಗಿದ್ದರು. ಅವರು ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದು, ಹಲವು ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರ ಸಾಮ್ರಾಜ್ಯವನ್ನ ವಿಸ್ತರಿಸಿದ್ದಾರೆ. ಅಲ್ಲದೇ, ಅವರು ಸ್ಲೋವಾಕ್ ಗಣರಾಜ್ಯದ ಗೌರವ ಕಾನ್ಸಲ್ ಆಗಿಯೂ ಕರ್ನಾಟಕ ಮತ್ತು ಕೇರಳದಲ್ಲಿ ಸೇವೆ ಸಲ್ಲಿಸಿದ್ದರು.