ಮನೆ ರಾಷ್ಟ್ರೀಯ ಸತ್ಯೇಂದ್ರ ಜೈನ್‌ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ: ಉದ್ಯಮಿಗಳಿಬ್ಬರ ಬಂಧನ

ಸತ್ಯೇಂದ್ರ ಜೈನ್‌ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ: ಉದ್ಯಮಿಗಳಿಬ್ಬರ ಬಂಧನ

0

ನವದೆಹಲಿ (New Delhi): ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಮೇಲಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಇಬ್ಬರು ಉದ್ಯಮಿಗಳನ್ನು ಬಂಧಿಸಿದೆ.

ವೈಭವ್‌ ಜೈನ್‌ ಮತ್ತು ಅನುಷ್ಕಾ ಜೈನ್‌ ಬಂಧಿತರು. ಪ್ರಕರಣ ಸಂಬಂಧ ಇ.ಡಿ ವಿಚಾರಣೆ ವೇಳೆ ಹಾರಿಕೆಯ ಉತ್ತರ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಉದ್ಯಮಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

57 ವರ್ಷದ ಸತ್ಯೇಂದ್ರ ಜೈನ್ ಅವರನ್ನು ಇಡಿ ಮೇ 30ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಬಂಧಿಸಿತ್ತು. ಜೈನ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.