ಎಜ್‌ಬಾಸ್ಟನ್ (Edgbaston): ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೊಳಗಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ತಂಡ ಈ ವೇಳೆಗೆ ಭಾರತ ತಂಡವು 20.3 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದೆ. ಆರಂಭಿಕ ಬ್ಯಾಟರ್‌ಗಳಾದ ಶುಭಮನ್ ಗಿಲ್ (17) ಹಾಗೂ ಚೇತೇಶ್ವರ ಪೂಜಾರ (13) ಜೇಮ್ಸ್ ಆ್ಯಂಡ್ರೆಸನ್ ಗೆ ವಿಕೆಟ್ ಒಪ್ಪಿಸಿದ್ದಾರೆ. ಈ ನಡುವೆ ಮಳೆ ಪಂದ್ಯಕ್ಕೆ ಅಡಚಣೆಯಾಗಿದೆ.
ಈ ಮೊದಲು ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್, ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಕೋವಿಡ್‌ನಿಂದಾಗಿ ಪ್ರತ್ಯೇಕವಾಸದಲ್ಲಿರುವ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಜಸ್‌ಪ್ರೀಮ್ ಬೂಮ್ರಾ ಮುನ್ನಡೆಸುತ್ತಿದ್ದಾರೆ.