ಮನೆ ರಾಜ್ಯ ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಪ್ರಹ್ಲಾದ್‌ ಜೋಶಿ

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಪ್ರಹ್ಲಾದ್‌ ಜೋಶಿ

0

ಹುಬ್ಬಳ್ಳಿ : ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನು ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದಿರುವ ಸಚಿವರು, ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ ಎನ್ನುತ್ತಿರುವ ಕಾಂಗ್ರೆಸ್ ನಾಯಕರ ಆರೋಪವನ್ನು ತಳ್ಳಿಹಾಕಿದ್ದಾರೆ.

2026-27ರ ಬಜೆಟ್ ಪ್ರಕಾರ, ಕರ್ನಾಟಕಕ್ಕೆ 63,049 ಕೋಟಿ ರೂ. ತೆರಿಗೆ ಹಂಚಿಕೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚೇ ತೆರಿಗೆ ಪಾಲು ರಾಜ್ಯಕ್ಕೆ ದೊರಕಲಿದೆ. 16ನೇ ಹಣಕಾಸು ಆಯೋಗದ ವರದಿಯು ರಾಜ್ಯಗಳ ತೆರಿಗೆ ಹಂಚಿಕೆಯನ್ನು ಶೇ.41 ರಲ್ಲಿಯೇ ಉಳಿಸಿಕೊಂಡಿದೆ. ತೆರಿಗೆ ಹಂಚಿಕೆಗಳಲ್ಲಿ ಬದಲಾವಣೆ ಇಲ್ಲದಿದ್ದರೂ ರಾಜ್ಯಗಳ ತೆರಿಗೆ ಹಂಚಿಕೆ ಪಾಲು ಬದಲಾಗಿದೆ. ಆ ಪ್ರಕಾರ ರಾಜ್ಯಗಳಿಗೆ ಹೆಚ್ಚೇ ತೆರಿಗೆ ಪಾಲು ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಜೆಟ್‌ ಬಗ್ಗೆ ಸಚಿವ ಆರ್.ಬಿ ತಿಮ್ಮಾಪುರ ಮಾತನಾಡಿ, ಕೇಂದ್ರ ಸರಕಾರದ ಬಜೆಟ್ ನಿರಾಸೆ ತಂದಿದೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಅನುಕೂಲಕರ ಯೋಜನೆ ಘೋಷಣೆ ಮಾಡಿಲ್ಲ. ಕರ್ನಾಟಕಕ್ಕೆ ಸಾಕಷ್ಟು ಅನ್ಯಾಯ ಮಾಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇವರ ಬಜೆಟ್‌ ನಲ್ಲಿ ರೈತ ಪರ ಯೋಜನೆಗಳು ಇಲ್ಲವೇ ಇಲ್ಲ. ಯುವಕರಿಗೆ ಉದ್ಯೋಗದ ಭರವಸೆ ಇಲ್ಲ. ಎಲ್ಲಿ ಚುನಾವಣೆ ನಡೆಯಲಿದೆಯೋ ಅಲ್ಲಿ ಹೆಚ್ಚಿನ ಅನುದಾನ ಘೋಷಣೆ ಆಗಿದೆ. ಕರ್ನಾಟಕಕ್ಕೆ ಬಹಳ ಅನ್ಯಾಯ ಮಾಡಿದ್ದು ನೋವು ತಂದಿದೆ. ದೇಶದ ಸಮಗ್ರ ಅಭಿವೃದ್ಧಿ ಪರ ಬಜೆಟ್ ಮಂಡನೆ ಆಗಿಲ್ಲ. ತುಂಬಾ ಪಾರ್ಲಿಮೆಂಟ್ ಸದಸ್ಯರು ಆಯ್ಕೆ ಆಗಿದ್ದಾರೆ. ನಾನು ಎಂಪಿಗಳಿಗೆ ಮನವಿ ಮಾಡುವೆ ಹೆಚ್ಚು ಹೆಚ್ಚು ಅನುದಾನ ತರಬೇಕು. ಕೇಂದ್ರದ ಮೇಲೆ ಹೆಚ್ಚು ಒತ್ತಡ ಮಾಡಬೇಕು ಎಂದರು.