ಮನೆ ಅಪರಾಧ ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ – ಮೂವರು ಆರೋಪಿಗಳ ಜಾಮೀನು ವಜಾ..!

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ – ಮೂವರು ಆರೋಪಿಗಳ ಜಾಮೀನು ವಜಾ..!

0

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

ಮೊದಲ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಈಗಾಗಲೇ ಹೈಕೋರ್ಟ್ ಜಾಮೀನು ನೀಡಿದೆ. ಅನಾರೋಗ್ಯದ ಹಿನ್ನಲೆ ಜಾಮೀನು ನೀಡಲಾಗಿದೆ. ಎರಡನೇ ಆರೋಪಿ ಅಂಬಿಕಾ, 3ನೇ ಆರೋಪಿ ಮಾದೇಶ ಹಾಗು ನಾಲ್ಕನೇ ಆರೋಪಿ ದೊಡ್ಡಯ್ಯ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಆದರೆ ಜಿಲ್ಲಾ ನ್ಯಾಯಾಲಯ ಇವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಮೊದಲ ಆರೋಪಿಗೆ ಜಾಮೀನು ಕೊಟ್ಟ ಬಳಿಕ ಸಂತ್ರಸ್ತರು ಪ್ರತಿಭಟನೆ ನಡೆಸಿದ್ದರು.