ಮನೆ ಸುದ್ದಿ ಜಾಲ ರಸ್ತೆಯಲ್ಲಿ ಮಲಗಿದ್ದ, ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ..!

ರಸ್ತೆಯಲ್ಲಿ ಮಲಗಿದ್ದ, ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ..!

0

ರಾಮನಗರ : ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ, ಘಟನೆ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಡರಾತ್ರಿ ಗ್ರಾಮದ ಹೊರವಲಯದ ಕೋಳಿಫಾರಂ ಬಳಿ ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿದೆ. ಒಂದು ನಾಯಿಯನ್ನು ಚಿರತೆ ಹೊತ್ತೊಯ್ದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಿರತೆ ಹಾವಳಿಯಿಂದ ಗ್ರಾಮಸ್ಥರು ಹೈರಾಣಾಗಿದ್ದು, ರಾತ್ರಿ ವೇಳೆ ಮನೆಯಿಂದ ಆಚೆಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಜಮೀನುಗಳಿಗೆ ತೆರಳಲು ಆತಂಕ ವ್ಯಕ್ತಪಡಿಸಿದ್ದಾರೆ. ಚಿರತೆ ಕಾಟ ತಪ್ಪಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.