ನವದೆಹಲಿ : ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಸಿದ್ದನ್ನು, ಇಂದು (ಫೆ.5) ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡವು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸಂಸತ್ತಿನ ಸದನ ಮುಂದೂಡಿದ್ದ ಲೋಕಸಭೆ ಸ್ಪೀಕರ್ ಪ್ರಧಾನಿ ಮೋದಿ ಭಾಷಣ ರದ್ದುಗೊಳಿಸಿದ್ದಕ್ಕೆ ಕಾರಣವನ್ನೂ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದೈಹಿಕ ದಾಳಿ ನಡೆಸಲು ಕಾಂಗ್ರೆಸ್ ಸಂಸದರು ಯೋಜನೆ ರೂಪಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿತ್ತು. ವಿರೋಧ ಪಕ್ಷದ ಸಂಸದರು ಅನಿರೀಕ್ಷಿತವಾದದ್ದನ್ನು ಮಾಡಬಹುದು ಎಂಬ ಮಾಹಿತಿ ಇತ್ತು. ಪ್ರಜಾಪ್ರಭುತ್ವದ ದೇವಾಲಯದಲ್ಲಿ ಅಹಿತಕರ ಘಟನೆಯನ್ನ ತಡೆಯಲು ಸದನವನ್ನು ಮುಂದೂಡಲಾಯಿತು. ಅಲ್ಲದೇ ಪ್ರಧಾನಿ ಮೋದಿ ಭಾಷಣ ರದ್ದುಗೊಳಿಸಲೂ ಇದೇ ಕಾರಣ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಿಸಿದ್ದನ್ನ ಖಂಡಿಸಿ ಸಂಸತ್ತಿನಲ್ಲಿ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು. ಈ ವೇಳೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿತ್ತು. ರಾಜ್ಯಸಭೆಯಲ್ಲೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸರ್ಕಾರದ ನಡೆಯನ್ನು ಖಂಡಿಸಿದರು.
ಪ್ರಧಾನಿ ಮೋದಿ ಭಾಷಣ ರದ್ದುಗೊಂಡಿದ್ದಕ್ಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದು, ಸದನದ ಬಾವಿಗಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಸ್ಪೀಕರ್ ಸದನವನ್ನ ಮಧ್ಯಾಹ್ನಕ್ಕೆ ಮುಂದೂಡಿದರು.
ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೇ ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಿಲ್ಲ, ವಿಪಕ್ಷ ನಾಯಕ ಮಾತನಾಡುತ್ತೇನೆ ಅಂದ್ರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ. ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ ಎಂದು ವಾಗ್ದಾಳಿ ನಡೆಸಿದರು.















